ಮಡಿಕೇರಿ: ಇದೇ ತಿಂಗಳು 26ನೇ ತಾರೀಖಿನಿಂದ 30ನೇ ತಾರೀಖಿನವರೆಗೆ ಒಡಿಸದ ಭುವನೇಶ್ವರದಲ್ಲಿ ನಡೆಯುವ 34 ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬಾಡ್ಮಿಂಟನ್ ಪಂದ್ಯಾಟಕ್ಕೆ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಆಯ್ಕೆಯಾಗಿರುತ್ತಾರೆ.
ರಾಜ್ಯದ ಪ್ರಥಮ ಶ್ರೇಯಾಂಕಿತ ಆಟಗಾರ್ತಿಯಾದ ದಿಯಾ ಅವರು 15 ವರ್ಷದೊಳಗಿನ ಸಿಂಗಲ್ಸ್ ಹಾಗು ಡಬಲ್ಸ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಇವರು ಮೈಸೂರಿನ ಪ್ರಗತಿ ಎಲೈಟ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ.ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಮೇದುರ ಅರುಣ್ ಪೆಮ್ಮಯ್ಯ ಹಾಗೂ ಬಿ.ಪಿ.ಭೀಮಯ್ಯ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ ಹಾಗೂ ಭೀಮಯ್ಯ ಅವರ ಪುತ್ರಿ.