ಉಡುಪಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ “ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಸಮಾರೋಪ ಸಮಾರಂಭ ಇಂದು ನಡೆಯಿತು.
ಚಾಂಪಿಯನ್ ಶಿಪ್ ನ ಸಮಗ್ರ ಪ್ರಶಸ್ತಿಯನ್ನು ಹರಿಯಾಣ ರಾಜ್ಯ ಗೆದ್ದುಕೊಂಡಿತು. ಮಹಿಳಾ ವಿಭಾಗದಲ್ಲಿ ಹರಿಯಾಣ ರಾಜ್ಯ ಚಾಂಪಿಯನ್ ಪ್ರಶಸ್ತಿ ಗೆದ್ದುಕೊಂಡರೆ, ಪುರುಷರ ವಿಭಾಗದಲ್ಲಿ ಉತ್ತರ ಪ್ರದೇಶ ರಾಜ್ಯ ಚಾಂಪಿಯನ್ ಆಗಿ ಹೊರಹೊಮ್ಮಿತು.
ಈ ಸಂದರ್ಭದಲ್ಲಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಎ.ಎಫ್.ಐ ಓರ್ಗನೈಸಿಂಗ್ ಡೆಲಿಗೇಟ್ ಸತೀಶ್ ಉಚ್ಚಿಲ, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಗೌರವ ಸಲಹೆಗಾರರಾದ ಅಶೋಕ್ ಅಡ್ಯಂತಾಯ, ಬ್ರಹ್ಮಾವರ ಮದರ್ ಪ್ಯಾಲೇಸ್ ನಿರ್ದೇಶಕ ಭರತ್ ಕುಮಾರ್ ಶೆಟ್ಟಿ, ಕರ್ನಾಟಕ ಆ್ಯತ್ಲೆಟಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಎಚ್ . ಟಿ. ಮಹಾದೇವ, ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ನಿರಂಜನ್ ಚಿಪ್ಳೂಂಕರ್, ಮಣಿಪಾಲ ಎಚ್ ಆರ್ ಪಿ ಗ್ರೂಪ್ ಚೇರ್ಮೆನ್ ಹರಿಪ್ರಸಾದ್ ರೈ, ಜಿಲ್ಲಾ ಅಮೆಚೂರ್ ಆ್ಯತ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಕೆಂಪರಾಜ್, ಕಾರ್ಯದರ್ಶಿ ರಾಜವೇಲು, ದಿನೇಶ್ ಕುಮಾರ್, ಕೋಶಾಧಿಕಾರಿಗಳಾದ ದೀಪಕ್ ರಾಮ್ ಬಾಯಾರಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ಉಪಸ್ಥಿತರಿದ್ದರು. ರಾಮಚಂದ್ರ ಪಟ್ಕರ್ ಸ್ವಾಗತಿಸಿ, ಚಿತ್ರಪಾಡಿ ಸತೀಶ್ಚಂದ್ರ ಶೆಟ್ಟಿ ನಿರೂಪಿಸಿದರು.