ಫುಟ್ಬಾಲ್ ಆಟಗಾರ ಪ್ರದೀಪ್ ಕುಮಾರ್ ಬ್ಯಾನರ್ಜಿ ನಿಧನಕ್ಕೆ ಗಣ್ಯರ ಸಂತಾಪ

ಫುಟ್ಬಾಲ್ ಆಟಗಾರ ಪ್ರದೀಪ್ ಕುಮಾರ್ ಬ್ಯಾನರ್ಜಿ ನಿಧನಕ್ಕೆ ಗಣ್ಯರ ಸಂತಾಪ

HSA   ¦    Mar 20, 2020 05:28:48 PM (IST)
ಫುಟ್ಬಾಲ್ ಆಟಗಾರ ಪ್ರದೀಪ್ ಕುಮಾರ್ ಬ್ಯಾನರ್ಜಿ ನಿಧನಕ್ಕೆ ಗಣ್ಯರ ಸಂತಾಪ

ಮುಂಬಯಿ: ಫುಟ್ಬಾಲ್ ಆಟಗಾರ ಪ್ರದೀಪ್ ಕುಮಾರ್ ಬ್ಯಾನರ್ಜಿ ಅವರು ಶುಕ್ರವಾರ ನಿಧನರಾಗಿದ್ದರು, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

83ರ ಹರೆಯದ ಬ್ಯಾನರ್ಜಿ ಅವರು ಕಳೆದ ಫೆಬ್ರವರಿಯಿಂದ ಕೊಲ್ಕತ್ತಾದ ಮೆಡಿಕಾ ಸೂಪರ್ ಸ್ಪೆಷಲಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹುಅಂಗಾಂಗ ವೈಫಲ್ಯದಿಂದಾಗಿ ಅವರು ಮೃತಪಟ್ಟಿದ್ದಾರೆ.

ಕಳೆದ ಎರಡು ವಾರಗಳಿಂದ ಅವರು ಕೃತಕ ಉಸಿರಾಟದ ವ್ಯವಸ್ಥೆಯಲ್ಲಿದ್ದರು.

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ, ಫುಟ್ಬಾಲ್ ಆಟಗಾರ ಸುನಿಲ್ ಛೆತ್ರಿ ಅವರು ಸಂತಾಪ ಸೂಚಿಸಿದ್ದಾರೆ.