ವಿರಾಟ್ ಕೊಹ್ಲಿ ಅಗ್ರ ಸ್ಥಾನಕ್ಕೆ ಬಂದಿದೆ ಕುತ್ತು?

ವಿರಾಟ್ ಕೊಹ್ಲಿ ಅಗ್ರ ಸ್ಥಾನಕ್ಕೆ ಬಂದಿದೆ ಕುತ್ತು?

HSA   ¦    Aug 19, 2019 05:18:39 PM (IST)
ವಿರಾಟ್ ಕೊಹ್ಲಿ ಅಗ್ರ ಸ್ಥಾನಕ್ಕೆ ಬಂದಿದೆ ಕುತ್ತು?

ದುಬೈ: ಲಾರ್ಡ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಆ್ಯಷಸ್ ನ ಎರಡನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ 92 ರನ್ ಇನ್ನಿಂಗ್ಸ್ ಆಡಿದ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ಮಹತ್ವದ ಇನ್ನಿಂಗ್ಸ್ ಆಡಿ ಎರಡನೇ ಟೆಸ್ಟ್ ಡ್ರಾಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ ಸ್ಮಿತ್ ಮೊದಲ ರ‍್ಯಾಂಕ್ ನಲ್ಲಿರುವ ವಿರಾಟ್ ಕೊಹ್ಲಿಗೆ ಸ್ಪರ್ಧೆಯೊಡ್ಡುತ್ತಿದ್ದಾರೆ.

ನ್ಯೂಜಿಲೆಂಡ್ ನ ನಾಯಕ ಕೇನ್ ವಿಲಿಯಮ್ಸನ್ ಹಿಂದಿಕ್ಕಿದ ಸ್ಟೀವ್ ಸ್ಮಿತ್ ಕೊಹ್ಲಿ(922)ಗಿಂತ 9 ಅಂಕ ದೂರವಿದ್ದಾರೆ. ಆದರೆ ಗುರುವಾರದಿಂದ ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಕೊಹ್ಲಿಗೆ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸುವ ಅವಕಾಶವಿದೆ.