ಚೆನ್ನೈ: ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾಜಿ ಕ್ರಿಕೆಟಿಗ ರಾಬಿನ್ ಸಿಂಗ್ ಅವರ ಕಾರನ್ನು ಚೆನ್ನೈ ಪೊಲೀಸರು ಸೀಜ್ ಮಾಡಿದ್ದಾರೆ.
ಶುಕ್ರವಾರ ಬೆಳಗ್ಗೆ ರಾಬಿನ್ ಸಿಂಗ್ ಅವರು ಈಸ್ಟ್ ಕೋಸ್ಟ್ ರೋಡ್ ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಯಾವುದೇ ರೀತಿಯ ಇ ಪಾಸ್ ಅಥವಾ ಕಾರಿನಲ್ಲಿ ಪ್ರಯಾಣಿಸುವಂತಹ ತುರ್ತು ಕಾರಣಗಳು ಕೂಡ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅವರು ತುಂಬಾ ಸಭ್ಯತೆಯಿಂದ ವರ್ತಿಸಿದರು. ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿದ ಅವರ ಕಾರನ್ನು ನಾವು ಸೀಜ್ ಮಾಡಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಚೆನ್ನೈಯಲ್ಲಿ ಜೂನ್ 19ರಿಂದ ಎರಡು ವಾರಗಳ ತನಕ ಲಾಕ್ ಡೌನ್ ಮುಂದುವರಿಸಲಾಗಿದೆ. ರಾಬಿನ್ ಸಿಂಗ್ ತನ್ನ ಮನೆಯಿಂದ ಎರಡು ಕಿ.ಮೀ.ಗೂ ಹೆಚ್ಚು ಕಾರಿನಲ್ಲಿ ಪ್ರಯಾಣಿಸಿದ್ದರು.