ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಪಂಜಾಬ್ ಕಿಂಗ್ಸ್ ನಾಯಕ ಕೆ ಎಲ್ ರಾಹುಲ್

ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಪಂಜಾಬ್ ಕಿಂಗ್ಸ್ ನಾಯಕ ಕೆ ಎಲ್ ರಾಹುಲ್

Ms   ¦    May 02, 2021 06:29:26 PM (IST)
ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಪಂಜಾಬ್ ಕಿಂಗ್ಸ್ ನಾಯಕ ಕೆ ಎಲ್ ರಾಹುಲ್

ನವದೆಹಲಿ : ಪಂಜಾಬ್ ಕಿಂಗ್ಸ್ ನಾಯಕ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಂಜಾಬ್ ತಂಡ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. 

ಇಂದು ( ಮೇ .2 ) ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗುವುದಾಗಿಯು, ಆಸ್ಪತ್ರೆಗೆ ದಾಖಲಿಸಿದ ನಂತರ ರಾಹುಲ್ ಕರುಳು ಸಂಬಂಧಿಸಿದ ಕಾಯಿಲೆಯಿಂದ ( appendicitis ) ಬಳಲುತ್ತಿರುವುದು ಸ್ಪಷ್ಟವಾಯಿತು . ಹೀಗಾಗಿ ಇದನ್ನು ನಿವಾರಿಸಲು ಶಸ್ತ್ರಚಿಕಿತ್ಸೆ ಅಗತ್ಯವಾಗಿದೆ . ಇದರಿಂದಾಗಿ ರಾಹುಲ್‌ಗೆ ಈ ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಫ್ರಾಂಚೈಸಿ ತಿಳಿಸಿದೆ .