ಇಂದೋರ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್ಮನ್ ಗಿಲ್ (104) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.
ಈ ಪಂದ್ಯದಲ್ಲಿ 92 ಎಸೆತಗಳನ್ನು ಎದುರಿಸಿದ ಗಿಲ್ 6 ಫೋರ್ 4 ಸಿಕ್ಸ್ಗಳೊಂದಿಗೆ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್ನಲ್ಲಿ 35 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಶುಭ್ಮನ್ ಗಿಲ್ ತಮ್ಮದಾಗಿಸಿಕೊಂಡರು.
ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಮೊದಲ 35 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 90 ಎಸೆತಗಳಲ್ಲಿ 105 ರನ್ ಬಾರಿಸಿದ್ದರು. ಶುಭ್ಮನ್ ಗಿಲ್ ಜೊತೆಗೂಡಿ 2ನೇ ವಿಕೆಟ್ಗೆ 200 ರನ್ಗಳ ಜೊತೆಯಾಟವಾಡಿದರು. ಈ ಮೂಲಕ ಇಂದೋರ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2ನೇ ವಿಕೆಟ್ಗೆ ಅತ್ಯಧಿಕ ರನ್ ಪೇರಿಸಿದ ಜೋಡಿ ಎಂಬ ಹೆಗ್ಗಳಿಕೆಗೆ ಶ್ರೇಯಸ್ ಅಯ್ಯರ್-ಶುಭ್ಮನ್ ಗಿಲ್ ಪಾತ್ರರಾದರು.