ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದ ವೆಸ್ಟ್ ಇಂಡೀಸ್ ನ ನಾಯಕ ಕೀರನ್

ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದ ವೆಸ್ಟ್ ಇಂಡೀಸ್ ನ ನಾಯಕ ಕೀರನ್

MS   ¦    Mar 04, 2021 02:53:06 PM (IST)
ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದ ವೆಸ್ಟ್ ಇಂಡೀಸ್ ನ ನಾಯಕ ಕೀರನ್

ಆಯಂಟಿಗುವಾ : ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದ ಮೂರನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವೆಸ್ಟ್ ಇಂಡೀಸ್ ನ ನಾಯಕ ಕೀರನ್ ಪೊಲಾರ್ಡ್.

ಆಂಟಿಗುವಾದ ಕೂಲಿಡ್ಜ್ ಕ್ರಿಕೆಟ್ ಮೈದಾನದಲ್ಲಿ ಶ್ರೀಲಂಕಾದ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾದ ಅಕಿಲಾ ಧನಂಜಯ ಅವರ ಒವರ್ ನಲ್ಲಿ 6ಸಿಕ್ಸರ್ ಸಿಡಿಸುವ ಮೂಲಕ ಪೊಲಾರ್ಡ್ ಈ ಸಾಧನೆ ಮಾಡಿದ್ದಾರೆ.

ಈ ಹಿಂದೆ, 2007ರಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ವಿಶ್ವಕಪ್ ನ ಉದ್ಘಾಟನಾ ಆವೃತ್ತಿಯಲ್ಲಿ ಯುವರಾಜ್ ಸಿಂಗ್ ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.