ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ದಾಖಲು

ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ದಾಖಲು

Ms   ¦    May 16, 2021 08:32:09 AM (IST)
ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ದಾಖಲು

ನವದೆಹಲಿ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಮತ್ತು ಇತರ 9 ಜನರ ವಿರುದ್ಧ, 23 ವರ್ಷದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಅವರ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

 

ಇದಕ್ಕೆ ಮುನ್ನ ದೆಹಲಿ ಪೊಲೀಸರುಕುಸ್ತಿಪಟು ವಿರುದ್ಧ ಲುಕ್ ಔಟ್ ಸರ್ಕ್ಯುಲರ್ (ಎಲ್‌ಒಸಿ) ಹೊರಡಿಸಿದ್ದರು. ಸುಶೀಲ್ ಕುಮಾರ್ ಬಂಧನಕ್ಕೆ ಬಹುಮಾನ ಘೋಷಿಸಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

 

ಸುಶೀಲ್ ಕುಮಾರ್ ವಿರುದ್ಧ ಎನ್‌ಬಿಡಬ್ಲ್ಯೂ ನೀಡಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ ಮತ್ತು ತಮ್ಮ ಅರ್ಜಿಯನ್ನು ಅವರು ಅಂಗೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

 

'ನಾವು ದೆಹಲಿ ಸರ್ಕಾರಕ್ಕೂ ಪತ್ರವೊಂದನ್ನು ಕಳುಹಿಸಿದ್ದೇವೆ, ಸುಶೀಲ್ ಕುಮಾರ್ ಮತ್ತು ಅವರ ಸಹವರ್ತಿ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಅಜಯ್ ಕುಮಾರ್ ಅವರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಬೇಕು 'ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

"ಎಫ್‌ಐಆರ್ ನೋಂದಾಯಿಸಿದ ನಂತರ, ನಾವು ಅವರಿಗೆ ನೋಟಿಸ್ ನೀಡಿದ್ದೇವೆ, ಆದರೆ ಅವರು ತನ್ನ ಫೋನ್ ಅನ್ನು ಸ್ವಿಚ್ ಆಫ್ ಮಾಡದ್ದಾರೆ. ಅಂದಿನಿಂದ ಅವರ ಪತ್ತೆಯಾಗಿಲ್ಲ.. ನಾವು ಅವರ ಸ್ನೇಹಿತರ ನಿವಾಸಗಳಲ್ಲಿ ಶೋಧ ನಡೆಸಿದ್ದೇವೆ ಮತ್ತು ಈಗ ಆತನ ಬಂಧನಕ್ಕೆ ಅನುಕೂಲವಾಗಲು ಮಾಹಿತಿ ನೀಡಿದವರಿಗೆ ಬಹುಮಾನವನ್ನು ಘೋಷಿಸಲು ನಿರ್ಧರಿಸಿದ್ದೇವೆ. 'ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

ಹತ್ರಾಸಲ್ ಸ್ಟೇಡಿಯಂ ಪಾರ್ಕಿಂಗ್ ಪ್ರದೇಶದಲ್ಲಿ ಜಗಳವಾಡುವಾಗ ಸಾಗರ್ ರಾಣಾ ಅವರನ್ನು ಥಳಿಸಲಾಯಿತು. ಘಟನೆಯ ನಂತರ ಸುಶೀಲ್ ಕುಮಾರ್ ವಿರುದ್ಧ ಕೊಲೆ, ಅಪಹರಣ ಮತ್ತು ಕ್ರಿಮಿನಲ್ ಪಿತೂರಿಯ ಎಫ್‌ಐಆರ್ ದಾಖಲಿಸಲಾಗಿದೆ.