ಕಿಂಗ್‌ ವಿರುದ್ಧ ರಾಜಸ್ಥಾನ ರಾಯಲ್ಸ್‌ಗೆ ಭರ್ಜರಿ ಜಯ

ಕಿಂಗ್‌ ವಿರುದ್ಧ ರಾಜಸ್ಥಾನ ರಾಯಲ್ಸ್‌ಗೆ ಭರ್ಜರಿ ಜಯ

Y.K.   ¦    Sep 28, 2020 09:00:04 AM (IST)
ಕಿಂಗ್‌ ವಿರುದ್ಧ ರಾಜಸ್ಥಾನ ರಾಯಲ್ಸ್‌ಗೆ ಭರ್ಜರಿ ಜಯ

ಶಾರ್ಜಾ: ಐಪಿಎಲ್ 13ನೇ ಆವೃತ್ತಿಯ 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 4 ವಿಕೆಟ್ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಚೇಸ್ ಮಾಡಿದ ದಾಖಲೆ ಬರೆಯಿತು.

224 ರನ್ ಬೃಹತ್ ರನ್ ಗುರಿ ಬೆನ್ನತ್ತಿದ ರಾಜಸ್ಥಾನ್ ತಂಡದ ಸ್ಟೀವನ್ ಸ್ಮಿತ್ (50), ಸಂಜು ಸ್ಯಾಮ್ಸನ್ (85) ಹಾಗೂ ರಾಹುಲ್ ತೆವಾಟಿಯಾ (53) ಉತ್ತಮ ಪ್ರದರ್ಶನದಿಂದ 19.3 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿದೆ.

ಇದಕ್ಕೆ ಮುನ್ನ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದಿದ್ದ ಪಂಜಾಬ್ ಪರ ಕನ್ನಡಿಗ ಮಯಾಂಕ್ ಅಗರ್ವಾಲ್ (106), ಕೆ.ಎಲ್. ರಾಹುಲ್ (69) ಅದ್ಭುತ ಪ್ರದರ್ಶನ ನೀಡಿದ್ದರು.

ರಾಜಸ್ಥಾನ ಪರ ಅಂಕಿತ್ ರಜಪೂರ್ ಹಾಗೂ ಟಾಮ್ ಕರ್ರನ್ ತಲಾ ಒಂದು ವಿಕೆಟ್ ಪಡೆದರೆ ಪಂಜಾಬ್ ಪರ ಮೊಹಮದ್ ಶಮಿ 3 ಕೊಟ್ರೇಲ್, ನೀಶಮ್ ಹಾಗೂ ಮುರುಗನ್ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಮಿಂಚಿದ್ದರು.