ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಹೊಸ ಇನ್ನಿಂಗ್ಸ್ ಆರಂಭ

ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಹೊಸ ಇನ್ನಿಂಗ್ಸ್ ಆರಂಭ

HSA   ¦    Oct 23, 2019 02:33:00 PM (IST)
ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಹೊಸ ಇನ್ನಿಂಗ್ಸ್ ಆರಂಭ

ಮುಂಬಯಿ: ಟೀ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷರಾಗಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಗಂಗೂಲಿ ಅವರು ಬುಧವಾರ ಮುಂಬಯಿಯಲ್ಲಿರುವ ಬಿಸಿಸಿಐ ಕಚೇರಿಯಲ್ಲಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.

ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಗಂಗಳೂಲಿ ಅವರನ್ನು ಬಿಸಿಸಿಐ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.

ಸುಪ್ರೀಂ ಕೋರ್ಟ್ ನೇಮಕ ಮಾಡಿದ ಸಿಒಎ ಅವಧಿಯು ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಪದಾಧಿಕಾರಿಗಳ ಆಯ್ಕೆಯು ನಡೆದಿದೆ.