ಬಾಲ್ ಬ್ಯಾಡ್ಮಿಂಟನ್: ರಾಷ್ಟ್ರಮಟ್ಟಕ್ಕೆ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿಯರು

ಬಾಲ್ ಬ್ಯಾಡ್ಮಿಂಟನ್: ರಾಷ್ಟ್ರಮಟ್ಟಕ್ಕೆ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿಯರು

YK   ¦    Oct 21, 2019 01:22:31 PM (IST)
ಬಾಲ್ ಬ್ಯಾಡ್ಮಿಂಟನ್: ರಾಷ್ಟ್ರಮಟ್ಟಕ್ಕೆ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿಯರು

ಕಾರ್ಕಳ: ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿನಿಯರು ಈಚೆಗೆ ಕಲಬುರ್ಗಿಯಲ್ಲಿ ನಡೆದ ರಾಜ್ಯ ಮಟ್ಟದ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದು, ಅವರಲ್ಲಿ ಇಬ್ಬರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರಾದ ಭಕ್ತಿ ಶೇರ್ವೆಗಾರ್ ಮತ್ತು ಶ್ವೇತಾ ಶೆಣೈ ಇವರು ಆಂಧ್ರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಪದವಿ ಪೂರ್ವ ಕಾಲೇಜು ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶ್ರೀ ಭುವನೇಂದ್ರ ಪದವಿ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್.ಸಿ. ತಿಳಿಸಿದ್ದಾರೆ.

ವಿದ್ಯಾರ್ಥಿನಿಯರ ಅಭೂತ ಪೂರ್ವ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು, ಅಧ್ಯಾಪಕೇತರರು ಮತ್ತು ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.