ಮ್ಯಾಚ್ ಫಿಕ್ಸಿಂಗ್ ಆರೋಪ: ಬೆಳಗಾವಿ ಪ್ಯಾಂಥರ್ಸ್ ಮಾಲಕನ ಸೆರೆ

ಮ್ಯಾಚ್ ಫಿಕ್ಸಿಂಗ್ ಆರೋಪ: ಬೆಳಗಾವಿ ಪ್ಯಾಂಥರ್ಸ್ ಮಾಲಕನ ಸೆರೆ

HSA   ¦    Sep 20, 2019 02:36:51 PM (IST)
ಮ್ಯಾಚ್ ಫಿಕ್ಸಿಂಗ್ ಆರೋಪ: ಬೆಳಗಾವಿ ಪ್ಯಾಂಥರ್ಸ್ ಮಾಲಕನ ಸೆರೆ

ಬೆಂಗಳೂರು: ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ನ ಬೆಳಗಾವಿ ಪ್ಯಾಂಥರ್ಸ್ ನ ಮಾಲಕನನ್ನು ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲಕ ಅಲಿ ಅಸ್ಪರ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಅಸ್ಪರ್ ಕೆಪಿಎಲ್, ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳನ್ನು ಫಿಕ್ಸ್ ಮಾಡಲು ಮುಂಬಯಿ ಬುಕ್ಕಿಗಳ ಜತೆಗೆ ಸೇರಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.