ಕೋವಿಡ್-19 ಪರೀಕ್ಷೆಗೆ ಒಳಪಟ್ಟ ಮಾಜಿ ನಾಯಕ ಧೋನಿ

ಕೋವಿಡ್-19 ಪರೀಕ್ಷೆಗೆ ಒಳಪಟ್ಟ ಮಾಜಿ ನಾಯಕ ಧೋನಿ

HSA   ¦    Aug 13, 2020 05:15:37 PM (IST)
ಕೋವಿಡ್-19 ಪರೀಕ್ಷೆಗೆ ಒಳಪಟ್ಟ ಮಾಜಿ ನಾಯಕ ಧೋನಿ

ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ರಾಂಚಿಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದು, ಯುಎಇಯಲ್ಲಿ ನಡೆಯಲಿರುವ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ಗೆ ತಯಾರಾಗಿರುವರು.

ಆಗಸ್ಟ್ 14ರಂದು ಅವರು ಚೆನ್ನೈಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನ ತರಬೇತಿ ಶಿಬಿರದಲ್ಲಿ ಭಾಗಿಯಾಗುವರು.

ಯುಎಇಯಲ್ಲಿ ಸಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದ್ದು, ಕಳೆದ ಕೆಲವು ಸಮಯದಿಂದ ಅಂತಾರಾಷ್ಟ್ರೀಯ ಕ್ರಿಕೆಟಿನಿಂದಲೂ ದೂರ ಉಳಿದಿರುವ ಧೋನಿ ಅವರ ಪ್ರದರ್ಶನದ ಮೇಲೆ ಎಲ್ಲರ ಕಣ್ಣಿದೆ.