ಇಂದು ನಡೆಯಬೇಕಿದ್ದ ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಪಂದ್ಯ ಮುಂದೂಡಿಕೆ

ಇಂದು ನಡೆಯಬೇಕಿದ್ದ ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಪಂದ್ಯ ಮುಂದೂಡಿಕೆ

Ms   ¦    May 03, 2021 03:04:23 PM (IST)
ಇಂದು ನಡೆಯಬೇಕಿದ್ದ ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಪಂದ್ಯ ಮುಂದೂಡಿಕೆ

ಅಹಮದಾಬಾದ್: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು (ಸೋಮವಾರ) ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತ್ತ ನೈಟ್‌ ರೈಡರ್ಸ್ (ಕೆಕೆಆರ್) ನಡುವೆ ನಡೆಯಬೇಕಿರುವ ಪಂದ್ಯ ಮುಂದೂಡಿಕೆಯಾಗಿದೆ ಎಂದು ವರದಿಯಾಗಿದೆ.

 

ಐಪಿಎಲ್‌ ಕ್ರಿಕೆಟ್‌ ಟೂರ್ನಿಯಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್ ಪ್ರತಿನಿಧಿಸುತ್ತಿರುವ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟ ಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಹೊಸ ದಿನಾಂಕವನ್ನು ಸದ್ಯದಲ್ಲೇ ಘೋಷಿಸಲಾಗುವುದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿವೆ ಎಂದು ವರದಿಗಳು ತಿಳಿಸುತ್ತವೆ. 

 

ಕೆಕೆಆರ್‌ ತಂಡದ ಆಟಗಾರರಿಗೆ ಕೋವಿಡ್ ದೃಢಪಟ್ಟಿರುವ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಈ ಹಿಂದೆಯೇ ಮಾಹಿತಿ ನೀಡಿದ್ದರು. ಈ ಕಾರಣದಿಂದ ಪಂದ್ಯ ಮುಂದೂಡಿಕೆಯಾಗಬಹುದು ಎಂದು ಸುಳಿವು ನೀಡಿದ್ದರು. ಕೋವಿಡ್ ಸಾಂಕ್ರಾಮಿಕದ ನಡುವೆಯೂ 'ಬಯೋ ಬಬಲ್' ವ್ಯವಸ್ಥೆಯಲ್ಲಿ ಐಪಿಎಲ್‌ ಟೂರ್ನಿ ನಡೆಯುತ್ತಿದೆ. ಕಟ್ಟುನಿಟ್ಟಿನ ನಿಯಮಾನುಸಾರ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಇಷ್ಟಾದರೂ ಆಟಗಾರರಿಗೆ ಕೋವಿಡ್ ತಗುಲಿರುವುದು ಅಭಿಮಾನಿಗಳಲ್ಲಿ ಅಚ್ಚರಿಗೆ ಕಾರಣವಾಗಿದೆ.