ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಕ್ಲಬ್ ಸೇರಿದ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್

ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಕ್ಲಬ್ ಸೇರಿದ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್

HSA   ¦    Jul 29, 2020 09:24:49 AM (IST)
ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಕ್ಲಬ್ ಸೇರಿದ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್

ಮ್ಯಾಂಚೆಸ್ಟರ್: ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಅವರು ಟೆಸ್ಟ್ ಕ್ರಿಕೆಟಿನಲ್ಲಿ 500 ವಿಕೆಟ್ ಪಡೆದ ಸಾಧನೆ ಮಾಡಿದರು.

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ನಲ್ಲಿ ಇಂಗ್ಲೆಂಡ್ ವೇಗಿ ಬ್ರಾಡ್ ಈ ಸಾಧನೆಗೈದ ವಿಶ್ವದ ಏಳನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮೊದಲ ಟೆಸ್ಟ್ ನಿಂದ ಹೊರಗುಳಿದಿದ್ದ ಬ್ರಾಡ್ ಎರಡನೇ ಟೆಸ್ಟ್ ನಲ್ಲಿ ಆರು ವಿಕೆಟ್ ಉರುಳಿಸಿದ್ದರು. ಮೂರನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಆರು ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ ನಾಲ್ಕು ವಿಕೆಟ್ ಪಡೆದರು.

ಬ್ರಾಡ್ ಒಟ್ಟು 140ನೇ ಟೆಸಟ್ ನಲ್ಲಿ 501 ವಿಕೆಟ್ ಪಡೆದ ಸಾಧನೆ ಮಾಡಿರುವರು. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800 ವಿಕೆಟ್, ಆಸ್ಟ್ರೇಲಿಯಾದ ಶೇನ್ ವಾರ್ನ್ 708 ವಿಕೆಟ್, ಭಾರತದ ಅನಿಲ್ ಕುಂಬ್ಳೆ 619 ವಿಕೆಟ್, ಇಂಗ್ಲೆಂಡಿನ ಜೇಮ್ಸ್ ಆಂಡರ್ಸನ್ 589 ವಿಕೆಟ್, ಆಸ್ಟ್ರೇಲಿಯಾದ ಗ್ಲೆನ್ ಮೆಕ್ ಗ್ರಾಥ್ 563 ಮತ್ತು ಕರ್ಟ್ನಿ ವಾಲ್ಶ್ 519 ವಿಕೆಟ್ ಪಡೆದು 500 ಕ್ಲಬ್ ನಲ್ಲಿರುವ ಬೌಲರ್ ಗಳು.