ಜಲ್ಲಿಕಟ್ಟು ಕ್ರೀಡೆ ವೇಳೆ ಸಂಭವಿಸಿದ ದುರಂತ: ನಾಲ್ವರ ಸಾವು

ಜಲ್ಲಿಕಟ್ಟು ಕ್ರೀಡೆ ವೇಳೆ ಸಂಭವಿಸಿದ ದುರಂತ: ನಾಲ್ವರ ಸಾವು

MS   ¦    Feb 27, 2021 02:52:03 PM (IST)
ಜಲ್ಲಿಕಟ್ಟು ಕ್ರೀಡೆ ವೇಳೆ ಸಂಭವಿಸಿದ ದುರಂತ: ನಾಲ್ವರ ಸಾವು

ಚೆನ್ನೈ : ತಮಿಳುನಾಡಿನ ಜನಪದ ಕ್ರೀಡೆಯಾಗಿರುವ ಜಲ್ಲಿಕಟ್ಟು ಸ್ಪರ್ಧೆ ವೇಳೆ ದುರಂತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ಈ ಘಟನೆ ಸಂಭವಿಸಿದೆ.

ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅಜಿತ್ , ಮಾರುತು , ಸೇತು ಮತ್ತು ಮಹೇಶ್ ಎನ್ನುವವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ . ಇನ್ನು ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಎಲ್ಲರೂ ಅಕ್ಕಪಕ್ಕದ ಗ್ರಾಮದವರಾಗಿದ್ದಾರೆ ಎಂದು ವರದಿಗಳು ತಿಳಿಸುತ್ತವೆ.