ಐಪಿಎಲ್‌ ಟೂರ್ನಿ: ಚೆನ್ನೈ ಎದುರು ಡೆಲ್ಲಿ ಕ್ಯಾಪಿಟಲ್ಸ್ ಜಯ

ಐಪಿಎಲ್‌ ಟೂರ್ನಿ: ಚೆನ್ನೈ ಎದುರು ಡೆಲ್ಲಿ ಕ್ಯಾಪಿಟಲ್ಸ್ ಜಯ

S.K   ¦    Sep 26, 2020 09:54:54 AM (IST)
ಐಪಿಎಲ್‌ ಟೂರ್ನಿ: ಚೆನ್ನೈ ಎದುರು ಡೆಲ್ಲಿ ಕ್ಯಾಪಿಟಲ್ಸ್ ಜಯ

ದುಬೈ: ಇಲ್ಲಿನ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ ಏಳನೇ ಪಂದ್ಯದಲ್ಲಿ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 44 ರನ್ ಗಳಿಂದ ಮಣಿಸಿದೆ.

ಉತ್ತಮ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ, ಸತತ ಎರಡನೇ ಗೆಲುವು ದಾಖಲಿಸಿತು. ಈ ಮೂಲಕ ಶ್ರೇಯಸ್ ಪಡೆ ಗೆಲುವಿನ ಓಟ ಮುಂದುವರಿಸಿದೆ.

ಯುವ ಆಟಗಾರ ಪೃಥ್ವಿ ಶಾ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಗೆ 175 ರನ್ ಗಳಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಮಾತ್ರ ಗಳಿಸಿತ್ತು.