ನನ್ನ ಆರೋಗ್ಯ ಸ್ಥಿರವಾಗಿದೆ: ಗಂಗೂಲಿ

ನನ್ನ ಆರೋಗ್ಯ ಸ್ಥಿರವಾಗಿದೆ: ಗಂಗೂಲಿ

Pavan Kumar   ¦    Jan 07, 2021 12:49:50 PM (IST)
ನನ್ನ ಆರೋಗ್ಯ ಸ್ಥಿರವಾಗಿದೆ: ಗಂಗೂಲಿ

ಕೋಲ್ಕತ್ತ: ಹೃದಯಾಘಾತದಿಂದ ಕೋಲ್ಕತ್ತದ ಖಾಸಗಿ ಆಸ್ಪತ್ರೆಯಲ್ಲಿ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಗಂಗೂಲಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ನಿನ್ನೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಪ್ರತಿಕ್ರಿಯೆ ನೀಡಿರುವ ಸೌರವ್ ಗಂಗೂಲಿ, ನನಗೆ ಉತ್ತಮ ಚಿಕಿತ್ಸೆ ನೀಡಿದ ವುಡ್‌ಲ್ಯಾಂಡ್ ಆಸ್ಪತ್ರೆ ಹಾಗೂ ವೈದ್ಯರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ ಎಂದಿದ್ದಾರೆ.

ಜೊತೆಗೆ ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ, ಈಗ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.