News Kannada
Sunday, February 25 2024
ಕ್ರೀಡೆ

ಕಾಮನ್‌ ವೆಲ್ತ್‌ ಗೇಮ್ಸ್‌ : ಭಾರತಕ್ಕೆ ಮತ್ತೊಂದು ಪದಕ, ಬೆಳ್ಳಿ ಗೆದ್ದ ಬಿಂದ್ಯಾರಾಣಿ ದೇವಿ

Commonwealth Games : Bindyarani Devi wins silver, another medal for India
Photo Credit : Twitter

ಕಾಮನ್‌ವೆಲ್ತ್ ಗೇಮ್ಸ್: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ ನ ವೇಟ್‌ಲಿಫ್ಟಿಂಗ್ ಸ್ಪರ್ಧೆಯ ಮಹಿಳೆಯರ 55 ಕೆಜಿ ತೂಕದ ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸುವ ಮೂಲಕ ಬಿಂದ್ಯಾರಾಣಿ ದೇವಿ ಅವರು ಭಾರತಕ್ಕೆ ನಾಲ್ಕನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ.

ಮಣಿಪುರದ 22 ವರ್ಷದ ಸ್ಪರ್ಧಿ ಬಿಂದ್ಯಾರಾಣಿ 202 ಕೆಜಿ ತೂಕವನ್ನು ಎತ್ತುವ ಮೂಲಕ ಬೆಳ್ಳಿ ಗೆದ್ದರು. ಕ್ಲೀನ್ ಮತ್ತು ಜರ್ಕ್‌ ವಿಭಾಗದ ಅಂತಿಮ ಸ್ಪರ್ಧೆಯಲ್ಲಿ ಅಮೋಘ 116 ಕೆಜಿ ತೂಕ ಎತ್ತುವ ಮೂಲಕ ಭಾರತಕ್ಕೆ ಪದಕ ದೊರಕಿಸಿಕೊಟ್ಟರು.

ಇದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬಿಂದ್ಯಾರಾಣಿ ಅವರಿಗೆ ಮೊದಲ ಪದಕವಾಗಿದೆ. ಇದಕ್ಕೂ ಮುನ್ನ ಶನಿವಾರ ಮಹಿಳೆಯರ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ, ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಬೆಳ್ಳಿ ಮತ್ತು 61 ಕೆಜಿ ವಿಭಾಗದಲ್ಲಿ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದುಕೊಂಡಿದ್ದು, ಭಾರತ ವೇಟ್‌ಲಿಫ್ಟಿಂಗ್ ಅಖಾಡದಲ್ಲಿ ನಾಲ್ಕು ಪದಕಗಳನ್ನು ಗಳಿಸುವ ಮೂಲಕ ಭರ್ಜರಿ ಆರಂಭ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು