News Kannada
Monday, December 11 2023
ಕ್ರೀಡೆ

ಆಸ್ಟ್ರೇಲಿಯಾವನ್ನು ಮಕಾಡೆ ಮಲಗಿಸಿ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ

teamindia won the match
Photo Credit : News Kannada

ಇಂದೋರ್​: ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ಹಂಗಾಮಿ ನಾಯಕ ಸ್ಟೀವ್ ಸ್ಮಿತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶುಭ್​ಮನ್ ಗಿಲ್​ ಜೊತೆ ಇನಿಂಗ್ಸ್ ಆರಂಭಿಸಿದ ರುತುರಾಜ್ ಗಾಯಕ್ವಾಡ್ ಕೇವಲ 8 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

50 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಟೀಮ್ ಇಂಡಿಯಾ ಮೊತ್ತ 399ಕ್ಕೆ ಬಂದು ನಿಂತಿತು.

ಟೀಮ್ ಇಂಡಿಯಾ ನೀಡಿದ 400 ರನ್​ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 28.2 ಓವರ್​ಗಳಲ್ಲಿ 217 ರನ್​ಗಳಿಗೆ ಆಲೌಟ್ ಆಗುವ ಮೂಲಕ ಆಸ್ಟ್ರೇಲಿಯಾ ತಂಡವು ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 99 ರನ್​ಗಳ ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಇನ್ನು ಮೂರನೇ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ನಡೆಯಲಿದೆ.

 

See also  ಬೆಂಗಳೂರು: ಭಿಕ್ಷಾಟನೆ ನಿಷೇಧ ಕಾಯ್ದೆ  ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದ ಶ್ರೀನಿವಾಸ ಪೂಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು