ರಾಜ್ಕೋಟ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಇಂದು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಈಗಾಗಲೇ 2-0 ಅಂತರದಿಂದ ವಶಪಡಿಸಿಕೊಂಡಿದೆ.
ಹೀಗಿದ್ದರೂ ಟೀಮ್ ಇಂಡಿಯಾಕ್ಕಿದು ಔಪಚಾರಿಕ ಪಂದ್ಯವಲ್ಲ. ಐಸಿಸಿ ಏಕದಿನ ವಿಶ್ವಕಪ್ ದೃಷ್ಟಿಯಿಂದ ಭಾರತಕ್ಕೆ ಇದು ಮಹತ್ವದ ಪಂದ್ಯವಾಗಿದೆ.ಅತ್ತ ಕಾಂಗರೂ ಪಡೆ ಮಾನ ಉಳಿಸಿಕೊಳ್ಳಲು ಕೊನೇ ಪಂದ್ಯ ಗೆಲ್ಲುವ ಪ್ಲಾನ್ನಲ್ಲಿದೆ.
ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇಲ್ಲ. ಇಂದು (ಸೆ.27) ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮಳೆ ಬೀಳುವ ನಿರೀಕ್ಷೆ ಇದ್ದು, ಪಂದ್ಯದ ದಿನ ಮಳೆಯ ಸಾಧ್ಯತೆ ಕಮ್ಮಿ. ಗರಿಷ್ಠ ತಾಪಮಾನವು 34 C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ. ಇಂದು ಮಧ್ಯಾಹ್ನ 1:30ಕ್ಕೆ ಪಂದ್ಯ ಆರಂಭವಾಗಲಿದೆ.