News Karnataka Kannada
Tuesday, April 16 2024
Cricket
ಕ್ರೀಡೆ

ನಮೀಬಿಯಾ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ ಗೆದ್ದ ಕರ್ನಾಟಕ

Karnataka beat Namibia
Photo Credit : Twitter

ಐದು ಪಂದ್ಯಗಳ ಏಕದಿನ ಸರಣಿಗಾಗಿ ನಮೀಬಿಯಾ ಪ್ರವಾಸ ಮಾಡಿರುವ ಕರ್ನಾಟಕ ಕ್ರಿಕೆಟ್ ತಂಡ ವಿಂಡ್‌ಹೋಕ್‌ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ 4ನೇ ಏಕದಿನ ಪಂದ್ಯವನ್ನು 5 ವಿಕೆಟ್​ಗಳಿಂದ ಗೆದ್ದು ಏಕದಿನ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ನಮೀಬಿಯಾ ತಂಡ ನಿಗದಿತ 50 ಓವರ್‌ಗಳಲ್ಲಿ ಏಳು ವಿಕೆಟ್‌ಗಳ ನಷ್ಟಕ್ಕೆ 254 ರನ್‌ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಕರ್ನಾಟಕ ತಂಡ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್​ಗಳಿಂದ ಗೆದ್ದು ಬೀಗಿತು.

254 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 46.1 ಓವರ್‌ಗಳಲ್ಲಿ 256 ರನ್ ಬಾರಿಸುವುದರೊಂದಿಗೆ ಸುಲಭ ಜಯ ಸಾಧಿಸಿತು. ತಂಡದ ಪರ ಆರಂಭಿಕ ಎಲ್‌ಆರ್ ಚೇತನ್ 58 ಎಸೆತಗಳಲ್ಲಿ 47 ರನ್ ಸಿಡಿಸಿದರೆ, ನಿಖಿನ್ ಜೋಶಿ 56 ರನ್ ಗಳಿಸಿ ರನೌಟ್ ಆದರು.

ಇನ್ನು ಸಿದ್ಧಾರ್ಥ್ 26 ರನ್​ಗಳ ಇನ್ನಿಂಗ್ಸ್ ಆಡಿದರೆ, ಕೃತಿಕ್ ಕೃಷ್ಣ 32 ರನ್ ಬಾರಿಸಿದರು. ರವಿಕುಮಾರ್ ಸಮರ್ಥ್ 56 ರನ್ ಮತ್ತು ಶುಭಾಂಗ್ ಹೆಗ್ಡೆ ಅಜೇಯ 30 ರನ್ ಬಾರಿಸುವುದರೊಂದಿಗೆ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು