ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಕಳೆದ ಒಂದೂವರೆ ದಶಕಗಳ ಕ್ರಿಕೆಟ್ ಬದುಕಿನಲ್ಲಿ ಹಲವು ಬಾರಿ ತಮ್ಮ ಹೇರ್‌ಸ್ಟೈಲ್ ಮೂಲಕವೇ ಗಮನ ಸೆಳೆದಿದ್ದಾರೆ. ಅದರಲ್ಲೂ ಟೀಂ ಇಂಡಿಯಾ ಪ್ರವೇಶಿಸಿದ್ದ ಆರಂಭದ ದಿನಗಳಲ್ಲಿ ಹೇರ್‌ಸ್ಟೈಲ್‌ನಿಂದಲೇ ಮಹಿ ಎಲ್ಲರ ಫೇವ್‌ರೆಟ್ ಆಗಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದಾಗಿನಿಂದ ಹಿಡಿದು 2007ರ ಐಸಿಸಿ ಟಿ20 ವಿಶ್ವಕಪ್ ಗೆಲ್ಲುವವರೆಗೆ ಮಹಿಯ ಉದ್ದದ ಹೇರ್‌ಸ್ಟೈಲ್ ಅಭಿಮಾನಿಗಳ ಮನಗೆದ್ದಿತ್ತು.
ಒಮ್ಮೆ ಭಾರತ ತಂಡವು ಪಾಕಿಸ್ತಾನ ಪ್ರವಾಸ ಮಾಡಿದ್ದಾಗ ಪಾಕಿಸ್ತಾನದ ಪ್ರಧಾನಿಯಾಗಿದ್ದ ಪರ್ವೇಜ್ ಮುಷರಫ್ ಕೂಡಾ ಧೋನಿ ಹೇರ್‌ಸ್ಟೈಲ್ ಗುಣಗಾನ ಮಾಡಿದ್ದರು. ಇದೀಗ ಧೋನಿ ಕ್ರಿಕೆಟ್ ವೃತ್ತಿಬದುಕಿನ ಸಂಧ್ಯಾಕಾಲದಲ್ಲಿದ್ದು, ಮತ್ತೊಮ್ಮೆ ಧೋನಿಯನ್ನು ಹೊಸ ಹೇರ್‌ಸ್ಟೈಲ್ ಲುಕ್‌ನಲ್ಲಿ ಕಣ್ತುಂಬಿಕೊಳ್ಳುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿದೆ.
ಪ್ರಖ್ಯಾತ ಕೇಶ ವಿನ್ಯಾಸಕಾರನಾಗಿರುವ ಅಲಿಮ್ ಹಕೀಂ, ಇದೀಗ ಧೋನಿಗೆ ಮತ್ತೊಮ್ಮೆ ಹೊಸ ಹೇರ್‌ಸ್ಟೈಲ್ ಮಾಡಿದ್ದಾರೆ. ಧೋನಿ ಸಹ ಹೊಸ ಲುಕ್‌ನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ. ಇದನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದು, ಭಾರೀ ಸದ್ದು ಮಾಡುತ್ತಿವೆ. ಅಭಿಮಾನಿಗಳಂತೂ ಯಾರಿದೂ ಹೊಸ ಹೀರೋ ಎಂದು ಜೈಕಾರ ಹಾಕುತ್ತಿದ್ದಾರೆ.