ಹೊಸದಿಲ್ಲಿ: ತನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ನಾರ್ಕೋ ಪರೀಕ್ಷೆ ಅಥವಾ ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾಗಲು ಸಿದ್ಧ ಎಂದು ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ. ಆದರೆ, ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಈ ಪರೀಕ್ಷೆಗೆ ಒಳಗಾಗಬೇಕು ಎಂದು ಬಿಜೆಪಿ ಸಂಸದ, ಬ್ರಿಜ್ ಭೂಷಣ್ ಶರಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
ಫೇಸ್ಬುಕ್ನಲ್ಲಿ ಬ್ರಿಜ್ ಭೂಷಣ್ ಈ ಬಗ್ಗೆ ಬರೆದುಕೊಂಡಿದ್ದು, “ಇಬ್ಬರೂ ಕುಸ್ತಿಪಟುಗಳು (ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್) ತಮ್ಮ ಪರೀಕ್ಷೆಗೆ ಸಿದ್ಧರಿದ್ದರೆ ನಾನೂ ಕೂಡ ಪರೀಕ್ಷೆಗೆ ಸಿದ್ಧ ಎಂದು ಹೇಳಿದ್ದಾರೆ. ಬಜರಂಗ್ ಮತ್ತು ವಿನೇಶ್ ಅವರು ಬ್ರಿಜ್ ಭೂಷಣ್ ವಿರುದ್ಧ ಮಹಿಳಾ ಗ್ರಾಪ್ಲರ್ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅವರನ್ನು ಬಂಧಿಸುವಂತೆ ಆಗ್ರಹಿಸಿ ಏಪ್ರಿಲ್ 23 ರಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ