News Kannada
Friday, September 22 2023
ಕ್ರೀಡೆ

ಬಹುಮಾನ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ನೀಡಿದ ಸಿರಾಜ್

Siraj gives prize money to ground staff
Photo Credit : IANS

ದೆಹಲಿ: ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕರಾರುವಾಕ್ ದಾಳಿ ಮೂಲಕ ಮಿಂಚಿದ್ದರು. ಈ ಅದ್ಭುತ ಪ್ರದರ್ಶನಕ್ಕೆ ಲಭಿಸಿದ ಪ್ರಶಸ್ತಿ ಮೊತ್ತವನ್ನು ಇದೀಗ ಮೈದಾನದ ಸಿಬ್ಬಂದಿಗಳಿಗೆ ನೀಡುವ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು.

ಆದರೆ ಟೀಮ್ ಇಂಡಿಯಾ ಬೌಲರ್​ಗಳ ಮಿಂಚಿನ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲುವಲ್ಲಿ ಶ್ರೀಲಂಕಾ ಬ್ಯಾಟರ್​ಗಳು ಪರದಾಡಿದರು. ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಅಲ್ಲದೆ 51 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಟಾರ್ಗೆಟ್ ತಲುಪುವ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಈ ಪಂದ್ಯದಲ್ಲಿ ಶ್ರೀ ಲಂಕಾನ್ನರ 6ವಿಕೆಟ್‌ ಕಬಳಿಸಿ ಕರಾರುವಾಕ್ ದಾಳಿ ಸಂಘಟಿಸಿದ ಸಿರಾಜ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು. ಆದರೆ ತನಗೆ ಸಿಕ್ಕಿದ 5 ಸಾವಿರ ಡಾಲರ್ ಪ್ರಶಸ್ತಿ ಮೊತ್ತವನ್ನು ಸಿರಾಜ್ ಕೊಲಂಬೊದ ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದರು.

ಈ ಬಗ್ಗೆ ಮಾತನಾಡಿದ ಸಿರಾಜ್, ಮೈದಾನದ ಸಿಬ್ಬಂದಿಗಳು ಇರದಿದ್ದರೆ ಈ ಟೂರ್ನಿಯನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಈ ನಗದು ಬಹುಮಾನ ಅವರಿಗೆ ಸಲ್ಲಬೇಕು. ಇದನ್ನು ನಾನು ಅವರಿಗೆ ನೀಡುತ್ತೇನೆ ಎಂದು ತಿಳಿಸಿದರು. ಇದೀಗ ಮೊಹಮ್ಮದ್ ಸಿರಾಜ್ ಅವರ ಮಾನವೀಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

See also  ಶಿವಮೊಗ್ಗ: ಪ್ರಧಾನಿ ಮೋದಿ ಅವರನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದ ಕೆ.ಎಸ್.ಈಶ್ವರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು