News Karnataka Kannada
Friday, April 26 2024
ಕ್ರೀಡೆ

ಪ್ರತಿಭಾವಂತ ಕ್ರೀಡಾಪಟು ಶೀಬಾಗೆ ಬೇಕಿದೆ ನೆರವು

Talented athlete Sheeba needs help
Photo Credit : News Kannada

ತಿರುವನಂತಪುರಂ: ಕೇರಳದ ಕೊಲ್ಲಂ ಮೂಲದ 38 ವರ್ಷದ ಶೀಬಾ ಅವರು ಗೋಡಂಬಿ ಕಾರ್ಖಾನೆಗಳು ಮತ್ತು ಹತ್ತಿರದ ಕೃಷಿಭೂಮಿಗಳಲ್ಲಿ ಕೆಲಸ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದಾರೆ.

ಈಕೆ ಪ್ರತಿಭಾವಂತ ಕ್ರೀಡಾಪಟು ಆಗಿದ್ದು, ದೇಶ ವಿದೇಶದ ಹಲವು ಪಂದ್ಯಗಳಲ್ಲಿ ಪಾಲ್ಗೊಂಡಿದ್ದಾರೆ. ಆಕೆ ಮ್ಯಾರಥಾನ್ ಮತ್ತು 5000ಮೀ ಓಟದಲ್ಲಿ ಸಾಧನೆ ಮಾಡಿದ್ದಾರೆ. ಈ ವರ್ಷದ ನವೆಂಬರ್‌ನಲ್ಲಿ ಫಿಲಿಪೈನ್ಸ್‌ನಲ್ಲಿ ನಡೆಯಲಿರುವ 22 ನೇ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ನೋಂದಾಯಿಸಿಕೊಂಡಿದ್ದಾರೆ. ಪಂದ್ಯಾಟದಲ್ಲಿ ಪಾಲ್ಗೊಳ್ಳಲು ಅವರಿಗೆ ಹಣದ ಕೊರತೆ ಎದುರಾಗಿದ್ದು, 1.5 ಲಕ್ಷ ರೂ. ಅಗತ್ಯವಿದೆ. ಈ ನಿಟ್ಟಿನಲ್ಲಿ ದಾನಿಗಳ ನೆರವು ಯಾಚಿಸಿದ್ದಾರೆ.

ಪಂದ್ಯಾಟದಲ್ಲಿ ಪಾಲ್ಗೊಳ್ಳು 1.50 ಲಕ್ಷ ರೂಪಾಯಿ ವೆಚ್ಚವಾಗಲಿದೆ ಎಂದು ಹೇಳಲಾಗಿದ್ದು, ನನ್ನ ಬಳಿ ಹಣವಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆ ಶ್ರೀಲಂಕಾ, ಬ್ರೂನಿ ಮತ್ತು ಇತರ ಕೆಲವು ದೇಶಗಳಲ್ಲಿ ನಡೆದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ನಲ್ಲಿ ಪಾಲ್ಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು