News Kannada
Friday, February 23 2024
ಕ್ರೀಡೆ

ವಿಜಯ್ ಹಜಾರೆ ಟ್ರೋಫಿ 2023: ಸೆಮಿಫೈನಲ್​ಗೆ ಪ್ರವೇಶಿಸಿದ ಕರ್ನಾಟಕ

ರಾಜ್​ಕೋಟ್​ನ ಸನೋಸಾರ ಕ್ರಿಕೆಟ್ ಮೈದಾನದಲ್ಲಿ ನಡೆದ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಭರ್ಜರಿ ಜಯ ಸಾಧಿಸಿದೆ. ವಿದರ್ಭ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು.
Photo Credit : News Kannada

ರಾಜ್​ಕೋಟ್: ರಾಜ್​ಕೋಟ್​ನ ಸನೋಸಾರ ಕ್ರಿಕೆಟ್ ಮೈದಾನದಲ್ಲಿ ನಡೆದ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಭರ್ಜರಿ ಜಯ ಸಾಧಿಸಿದೆ. ವಿದರ್ಭ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಕರ್ನಾಟಕ ಬೌಲರ್​ಗಳು ಯಶಸ್ವಿಯಾಗಿದ್ದರು.

ಯಶ್ ಕಮ್ 72 ಎಸೆತಗಳಲ್ಲಿ 38 ರನ್ ಬಾರಿಸಿದರೆ, ಶುಭಂ ದುಬೆ 59 ಎಸೆತಗಳಲ್ಲಿ 1 ಸಿಕ್ಸ್​ ಹಾಗೂ 4 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಆದರೆ ಇವರಿಬ್ಬರ ನಿರ್ಗಮನದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕರ್ನಾಟಕ ಬೌಲರ್​ಗಳು ವಿದರ್ಭ ತಂಡವನ್ನು 44.5 ಓವರ್​ಗಳಲ್ಲಿ 173 ರನ್​ಗಳಿಗೆ ಆಲೌಟ್ ಮಾಡಿದರು.

ಕರ್ನಾಟಕ ತಂಡವು 40.3 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 177 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕರ್ನಾಟಕ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು