News Karnataka Kannada
Friday, April 26 2024

ಅರ್ಚಕರಿಗೆ ವಿಮಾ ಯೋಜನೆ ಜಾರಿಗೆ ಕ್ರಮ

12-Oct-2021 ಬೆಂಗಳೂರು ನಗರ

ಬೆಂಗಳೂರು: ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್  ಸಚಿವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ನಾನು ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ಮೇಲೆ ಅವರದ ರಕ್ಷಣೆಗೆ ವಿನೂತನ ವಿಮೆ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದು ಸಚಿವರು ಹೇಳಿದರು. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ಈ ಬಗ್ಗೆ  ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಲಾಗಿದೆ. ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ 35ರಷ್ಟು ಮೀರದಂತೆ ನೌಕರರನ್ನು 6ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ  ಎಂದು ತಿಳಿಸಿದರು. “ಸಿ” ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ 6 ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ವೇತನ ನೀಡುಲಾಗುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸಿ” ದರ್ಜೆಯ ಬಹುತೇಕ ದೇವಸ್ಥಾನಗಳಲ್ಲಿ ಖಾಯಂ ಅರ್ಚಕರು ಇರುವುದಿಲ್ಲ. ಈ ಬಗ್ಗೆ ಎಲ್ಲ ದೇವಸ್ಥಾಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಎಲ್ಲ ದೇವಸ್ಥಾನಗಳಿಗೆ ತಸ್ತಿಕ ಹಣ 19.ಕೋಟಿ ರೂ. ಬಾಕಿ ಇದ್ದು ಶೀಘ್ರವೇ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು