NewsKarnataka
Saturday, October 02 2021

ಇತರೆ

ಭಾರತ್ ಬಂದ್‌ಗೆ ಬೆಂಬಲ ಕೊಟ್ಟ ‘ಬಿಗ್ ಬಾಸ್’ ವಿನ್ನರ್, ಮಾರ್ಡನ್ ರೈತ ಶಶಿ ಕುಮಾರ್

ಕೇಂದ್ರ ಸರಕಾರ ಏಕಪಕ್ಷೀಯವಾಗಿ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್‌ 27 ರಂದು ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ. ಕರ್ನಾಟಕದಲ್ಲೂ ಭಾರತ್ ಬಂದ್‌ಗೆ ರೈತ ಸಂಘಟನೆಗಳು ಬೆಂಬಲ ನೀಡಿವೆ.

ಶಶಿ ಕುಮಾರ್ ಇನ್ಸ್ಟಾಗ್ರಾಮ್ ಪೋಸ್ಟ್
‘’ರೈತ ನಮಗೆ ಆಹಾರ ನೀಡುತ್ತಾನೆ. ರೈತರ ಪ್ರತಿಭಟನೆಯ ಬಗ್ಗೆ ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿ’’ ಎಂದು ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ‘ಬಿಗ್ ಬಾಸ್’ ವಿನ್ನರ್ ಶಶಿ ಕುಮಾರ್, ಅದರ ಜೊತೆಗೆ ಒಂದು ವಿಡಿಯೋವನ್ನೂ ಅಪ್‌ಲೋಡ್ ಮಾಡಿದ್ದಾರೆ.

‘’ಇದೇ 27ನೇ ತಾರೀಖು ರೈತ ಪ್ರತಿಭಟನೆ ನಡೆಯುತ್ತಿದೆ. ಸಾರ್ವಜನಿಕರಾದ ನೀವುಗಳು ಕೃಷಿ ಕಾಯ್ದೆ ಬಗ್ಗೆ ತಿಳಿದುಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ. ಯಾಕಂದ್ರೆ, ಕೆಲವು ತಿಂಗಳುಗಳಿಂದ ರೈತರ ಪ್ರತಿಭಟನೆ ನಡೆಯುತ್ತಲೇ ಇದೆ. ನಾನು ಕೂಡ ಪ್ರತಿಭಟನೆಗಳಲ್ಲಿ ಪಾಲ್ಗೊಂಡು ನನ್ನ ನಿಲುವುಗಳನ್ನು ವ್ಯಕ್ತಪಡಿಸಿದ್ದೇನೆ. ಈಗ ನಡೆಯುತ್ತಿರುವ ಪ್ರತಿಭಟನೆಗೂ ನಾನು ನನ್ನ ಸಂಪೂರ್ಣ ಬೆಂಬಲ ನೀಡುತ್ತೇನೆ. ಕೃಷಿ ಕಾಯ್ದೆಯಿಂದ ಯಾವುದೇ ಪ್ರಯೋಜನ ಆಗಿಲ್ಲ. ರೈತರ ಬೆಳೆದ ಅನ್ನದ ಋಣ ನಿಮ್ಮ ಮೇಲಿದೆ. ದಯವಿಟ್ಟು ಎಲ್ಲರೂ ರೈತರ ಪ್ರತಿಭಟನೆಗೆ ಬೆಂಬಲ ಕೊಡಿ.. ಜೈ ಜವಾನ್.. ಜೈ ಕಿಸಾನ್’’ ಎಂದು ವಿಡಿಯೋದಲ್ಲಿ ಶಶಿ ಕುಮಾರ್ ಹೇಳಿದ್ದಾರೆ.

ಸೆಪ್ಟೆಂಬರ್ 27 ರಂದು ನಡೆಯುವ ಭಾರತ್ ಬಂದ್‌ಗೆ ‘ಬಿಗ್ ಬಾಸ್ ಕನ್ನಡ 6’ ವಿನ್ನರ್ ಶಶಿ ಕುಮಾರ್ ಬೆಂಬಲ ಕೊಟ್ಟಿದ್ದಾರೆ. ಮಾರ್ಡನ್ ರೈತ ಅಂತಲೇ ಫೇಮಸ್ ಆಗಿರುವ ಶಶಿ ಕುಮಾರ್ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ್ದಾರೆ. ‘’ರೈತರ ಪ್ರತಿಭಟನೆಯ ಬಗ್ಗೆ ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿ’’ ಎಂದು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಶಶಿ ಕುಮಾರ್ ತಿಳಿಸಿದ್ದಾರೆ.ಕೇಂದ್ರ ಸರಕಾರ ಏಕಪಕ್ಷೀಯವಾಗಿ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್‌ 27 ರಂದು ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ. ಕರ್ನಾಟಕದಲ್ಲೂ ಭಾರತ್ ಬಂದ್‌ಗೆ ರೈತ ಸಂಘಟನೆಗಳು ಬೆಂಬಲ ನೀಡಿವೆ.

ಸೆಪ್ಟೆಂಬರ್ 27 ರಂದು ನಡೆಯುವ ಭಾರತ್ ಬಂದ್‌ಗೆ ‘ಬಿಗ್ ಬಾಸ್ ಕನ್ನಡ 6’ ವಿನ್ನರ್ ಶಶಿ ಕುಮಾರ್ ಬೆಂಬಲ ಕೊಟ್ಟಿದ್ದಾರೆ. ಮಾರ್ಡನ್ ರೈತ ಅಂತಲೇ ಫೇಮಸ್ ಆಗಿರುವ ಶಶಿ ಕುಮಾರ್ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ್ದಾರೆ. ‘’ರೈತರ ಪ್ರತಿಭಟನೆಯ ಬಗ್ಗೆ ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿ’’ ಎಂದು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಶಶಿ ಕುಮಾರ್ ತಿಳಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!