ಇಸ್ಲಾಮಾಬಾದ್: ಇತ್ತೀಚಿಗೆ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡಕ್ಕೆ ಭಾರತದಿಂದ ಬೆದರಿಕೆ ಇಮೇಲ್ ಬಂದಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಫವಾದ್ ಚೌಧರಿ ಆರೋಪಿಸಿದ್ದಾರೆ.
18 ವರ್ಷಗಳ ನಂತರ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ನ್ಯೂಜಿಲ್ಯಾಂಡ್ ಭದ್ರತಾ ಬೆದರಿಕೆಯ ಕಾರಣ ತಮ್ಮ ಮೊದಲ ಪ್ರವಾಸವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ದ್ವಿಪಕ್ಷೀಯ ಸರಣಿಯನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ(ಇಸಿಬಿ) ರದ್ದು ಪಡಿಸಿದೆ.