ನವದೆಹಲಿ: ಸೌದಿ ಅರೇಬಿಯಾದ ಮದಿನಾ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 35 ವಿದೇಶಿಯರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಮದಿನಾದ ಅಲ್–ಅಖಲ್ ಎಂಬಲ್ಲಿ ಬೃಹತ್ ಗಾತ್ರದ ಯಂತ್ರವೊಂದಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿದೆ. ಪರಿಣಾಮವಾಗಿ 35 ವಿದೇಶಿಯರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಮೀಪದ ಅಲ್–ಹಮ್ಮಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಮೃತರಲ್ಲಿ ಹೆಚ್ಚಿನವರು ಅರಬ್ ಮತ್ತು ಏಷ್ಯಾ ರಾಷ್ಟ್ರಗಳ ಯಾತ್ರಿಕರು ಎನ್ನಲಾಗಿದೆ.