ಅಯೋಧ್ಯೆ ತೀರ್ಪು ಹಿನ್ನೆಲೆ: ಕಟ್ಟೆಚ್ಚರ ವಹಿಸಲು ಎಲ್ಲಾ ರಾಜ್ಯಗಳಿಗೆ ಸೂಚನೆ

ಅಯೋಧ್ಯೆ ತೀರ್ಪು ಹಿನ್ನೆಲೆ: ಕಟ್ಟೆಚ್ಚರ ವಹಿಸಲು ಎಲ್ಲಾ ರಾಜ್ಯಗಳಿಗೆ ಸೂಚನೆ

HSA   ¦    Nov 07, 2019 06:00:50 PM (IST)
ಅಯೋಧ್ಯೆ ತೀರ್ಪು ಹಿನ್ನೆಲೆ: ಕಟ್ಟೆಚ್ಚರ ವಹಿಸಲು ಎಲ್ಲಾ ರಾಜ್ಯಗಳಿಗೆ ಸೂಚನೆ

ನವದೆಹಲಿ: ರಾಮಜನ್ಮಭೂಮಿ-ಬಾಬರಿ ಮಸೀದಿ ತೀರ್ಪು ಸದ್ಯದಲ್ಲೇ ಹೊರಬೀಳಲಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳು ಎಚ್ಚರಿಕೆಯಿಂದ ಇರಬೇಕು ಗೃಹ ಸಚಿವಾಲಯ(ಎಂಎಚ್ಎ) ಸೂಚನೆ ಜಾರಿ ಮಾಡಿದೆ.

ಮಂದಿರವಿರುವ ಅಯೋಧ್ಯೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಿಕೊಳ್ಳಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಗೃಹ ಸಚಿವಾಲಯವು ಸ್ಪಷ್ಟ ಸೂಚನೆ ನೀಡಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸಾಮಾಜಿಕ ಜಾಲತಾಣ ಮತ್ತು ಎಸ್ ಎಂಎಸ್ ಮೂಲಕ ಗಾಳಿಸುದ್ದಿ ಹರಡುವ ಕಾರಣದಿಂದಾಗಿ ಉತ್ತರ ಪ್ರದೇಶದಲ್ಲಿ ಅತ್ಯಧಿಕ ಮಟ್ಟದಲ್ಲಿ ಪೊಲೀಸ್ ಹಾಗೂ ಅರೆ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿದೆ.

ಈಗಾಗಲೇ ಉತ್ತರ ಪ್ರದೇಶಕ್ಕೆ ಸಿಎಪಿಎಫ್, ಸಿಆರ್ ಪಿಎಫ್, ಐಟಿಬಿಪಿ, ಸಿಐಎಸ್ ಎಫ್, ಎಎಸ್  ಮತ್ತು ಆರ್ ಎಎಫ್ ನ ಯೋಧರನ್ನು ಈಗಾಗಲೇ ಉತ್ತರ ಪ್ರದೇಶಕ್ಕೆ ರವಾನಿಸಲಾಗಿದೆ.