ಉಗ್ರ ಹಫೀಜ್ ಬಿಡುಗಡೆ ವೇಳೆ ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ

ಉಗ್ರ ಹಫೀಜ್ ಬಿಡುಗಡೆ ವೇಳೆ ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ

HSA   ¦    Nov 25, 2017 02:28:47 PM (IST)
ಉಗ್ರ ಹಫೀಜ್ ಬಿಡುಗಡೆ ವೇಳೆ ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ

ಲಖೀಂಪುರ: ಲಷ್ಕರ್ ಉಗ್ರ ಹಫೀಜ್ ಸಯೀದ್ ಬಿಡುಗಡೆಗೆ ವಿಶ್ವಸಮುದಾಯವೇ ಆಕ್ರೋಶ ವ್ಯಕ್ತಪಡಿಸಿದೆ. ಆದರೆ ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಬಿಡುಗಡೆಗೆ ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಿಸಿದ್ದಾರೆ.
ಹಫೀಜ್ ಬಿಡುಗಡೆಗೆ ಸಂಭ್ರಮಪಟ್ಟ ಘಟನೆ ಉತ್ತರ ಪ್ರದೇಶದ ಲಖೀಂಪುರದ ಶಿವಪುರಿಯ ಬೇಗಂ ಬಾಗ್ ಕಾಲನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಸುಮಾರು 20-25 ಮಂದಿ ಯುವಕರು ಪಾಕಿಸ್ತಾನದ ಧ್ವಜ ಹಿಡಿದು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆಯಲ್ಲಿ ತೊಡಗಿದರು.

ಘಟನೆ ಬಗ್ಗೆ ಮಾಹಿತಿ ತಿಳಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಕಾಶ್ ದೀಪ್ ಅವರು ಸ್ಥಳಕ್ಕೆ ಬಂದಾಗ ಜನರು ಗುಂಪು ಸೇರಿ ಅಶಾಂತಿ ಉಂಟು ಮಾಡಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮ ತೆಗೆದುಕೊಂಡಿದ್ದಾರೆ ಎಂದು ಆಕಾಶ್ ದೀಪ್ ತಿಳಿಸಿದ್ದಾರೆ.

ಹಫೀಜ್ ಬಿಡುಗಡೆಗೆ ಸಂಭ್ರಮಾಚರಣೆ ನಡೆಯುತ್ತಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಲುಪಿದೆ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸದ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂದ ಮಾಹಿತಿ ಬಳಿಕ ಪೊಲೀಸರು ಎಚ್ಚೆತ್ತುಕೊಂಡರು. ಪೊಲೀಸರು ಪಾಕಿಸ್ತಾನದ ಧ್ವಜ ತೆಗೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.