ಅರವಿಂದ್ ಕೇಜ್ರಿವಾಲ್ ಕಚೇರಿ ಮೇಲೆ ಸಿಬಿಐ ದಾಳಿ

ಅರವಿಂದ್ ಕೇಜ್ರಿವಾಲ್ ಕಚೇರಿ ಮೇಲೆ ಸಿಬಿಐ ದಾಳಿ

Dec 15, 2015 11:54:41 AM (IST)

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿ ಮೇಲೆ ಮಂಗಳವಾರ ಸಿಬಿಐ ಅಧಿಕಾರಿಗಳು ದಾಳಿ ಮಾಡಿ, ಬೀಗ ಮುದ್ರೆ ಜಡಿದು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Modi a coward and psychopath: Kejriwal on CBI raid -1ಲಂಚ ಸ್ವೀಕಾರದ ಆರೋಪದ ಮೇಲೆ ಡಿಸೆಂಬರ್ 10 ರಂದು ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದು, ಇದರ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. 2 ಗಂಟೆಗಳಿಗೂ ಹೆಚ್ಚು ಕಾಲ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು ನಂತರ ಕಚೇರಿಗೆ ಬೀಗ ಜಡಿದಿದ್ದಾರೆ ಎನ್ನಲಾಗಿದೆ.

ದಾಳಿಯ ಬಗ್ಗೆ ಟ್ವೀಟ್‌ ಮಾಡಿರುವ ಕೇಜ್ರಿವಾಲ್‌ ಮೋದಿ ಅವರು ನನ್ನನ್ನು ರಾಜಕೀಯವಾಗಿ ನಿಯಂತ್ರಿಸಲು ಸಾಧ್ಯವಿಲ್ಲ, ಅವರು ಈಗ ಹೇಡಿಯಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.