ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ ವ್ಯಕ್ತಿಯ ಬಂಧನ

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ ವ್ಯಕ್ತಿಯ ಬಂಧನ

SRJ   ¦    Apr 25, 2018 10:12:42 AM (IST)
ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ ವ್ಯಕ್ತಿಯ ಬಂಧನ

ಕೊಯಮತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆದಿದೆ ಎಂದು ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು 1998ರ ಕೊಯಮತ್ತೂರು ಸರಣಿ ಸ್ಫೋಟಕ್ಕೆ ಸಂಬಂಧಿಸಿ ಜೈಲು ಶಿಕ್ಷೆಗೆ ಗುರಿಯಾಗಿ ಇದೀಗ ಬಿಡುಗಡೆಯಾಗಿರುವ ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಈತ ಪ್ರಧಾನಿ ಅವರ ಹತ್ಯೆಗೆ ಸಂಚು ರೂಪಿಸಿದ ಬಗ್ಗೆ ದೂರವಾಣಿಯಲ್ಲಿ ನಡೆಸಿದ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸುಮಾರು 8 ನಿಮಿಷಗಳ ಸಂಭಾಷಣೆಯ ಧ್ವನಿಮುದ್ರಣದಲ್ಲಿ ಆತ ವಾಹನಗಳ ಹಣಕಾಸಿನ ಬಗ್ಗೆ ಮಾತನಾಡಿದ್ದು, ಮಧ್ಯದಲ್ಲಿ ಮೋದಿ ಅವರ ಹತ್ಯೆ ಬಗ್ಗೆ ಮಾತನಾಡಿದ್ದಾನೆ. '1998ರಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ನಗರಕ್ಕೆ ಭೇಟಿ ನೀಡಿದ್ದಾಗ ಬಾಂಬ್ ಗಳನ್ನು ಇರಿಸಿದ್ದೆವು' ಎಂದು ಇದೇ ಸಂದರ್ಭದಲ್ಲಿ ಹೇಳಿದ್ದಾನೆ.

ರಫೀಕ್ ವಿರುದ್ಧ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗುತ್ತದೆ. ಹಾಗೂ ಸಂಭಾಷಣೆ ಮತ್ತು ಮಾತುಕತೆ ನಡೆಸಿದ ವ್ಯಕ್ತಿಗಳ ಬಗ್ಗೆ ಪತ್ತೆ ನಡೆಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.