ಪಾಟ್ನಾ: ಬಿಹಾರದಲ್ಲಿ ಜೆಡಿಯು, ಆರ್ ಜೆಡಿ ಮಹಾಮೈತ್ರಿ ಕೂಟ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಡಿಯು ನಾಯಕ ನಿತಿಶ್ ಕುಮಾರ್ ಅವರು 5ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಹಾಮೈತ್ರಿ ಕೂಟದ 28 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾಲೂ ಪ್ರಸಾದ್ ಯಾದವ್ ಮಕ್ಕಳಾದ ತೇಜ್ ಪ್ರತಾಪ್ ಯಾದವ್, ತೇಜಸ್ವಿ ಪ್ರಸಾದ್ ಯಾದವ್, ಅಬ್ದುಲ್ ಬಾರಿ ಸಿದ್ದಿಖಿ, ಬಿಜೇಂದ್ರ ಪ್ರಸಾದ್ ಯಾದವ್ ಸೇರಿದಂತೆ 28 ಮಂದಿ ನಿತೀಶ್ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ಮಧ್ಯಾಹ್ನ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ಕೇಶರಿನಾಥ್ ತ್ರಿಪಾಠಿ ಅವರು ನಿತಿಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ನಿತಿಶ್ ಕುಮಾರ್ ಅವರೊಂದಿಗೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರರಾದ ತೇಜಶ್ವಿ ಯಾದವ್ ಹಾಗೂ ತೇಜ್ ಪ್ರತಾಪ್ ಯಾದವ್ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.