ಅಹಮ್ಮದಾಬಾದ್: ಅಸಹಿಷ್ಣುತೆ ಇರುವುದು ನಮ್ಮ ಮನಸ್ಸಿನಲ್ಲಿ. ಅದನ್ನು ಮೊದಲು ಮನಸ್ಸಿನಿಂದ ತೆಗೆದು ಹಾಕಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದರು.
ಇಲ್ಲಿನ ಸಾಬರಮತಿ ಆಶ್ರಮದಲ್ಲಿನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿದಿನವೂ ಪ್ರಪಂಚದಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ನೋಡುತ್ತಿರುತ್ತೇವೆ. ಈ ರೀತಿಯ ಹಿಂಸಾಚಾರ ಕತ್ತಲೆಯ ಮನೋಭಾವದಿಂದ ಕೂಡಿದೆ. ಹಿಂಸಾಚಾರದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ಅಹಿಂಸೆಯ ಶಕ್ತಿಯನ್ನು ನಾವು ಮರೆಯಬಾರದು ಎಂದರು.