ಚೆನ್ನೈ: ತಮಿಳುನಾಡಿನಲ್ಲಿ ಜಲಪ್ರಳಯಕ್ಕೆ ತತ್ತರಿಸಿದ ಜನತೆಯ ನೆರವಿಗೆ, ಪರಿಹಾರ ಕಾರ್ಯಗಳಿಗೆ ಒಟ್ಟು 1940 ಕೋಟಿ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಅವರು ಗುರುವಾರ ಚೆನ್ನೈನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಹಾಗೂ ರಾಜ್ಯಪಾಲ ಕೆ.ರೋಸಯ್ಯ ಅವರೊಂದಿಗೆ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು. ಪ್ರವಾಹ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ 940 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಇನ್ನೂ 1 ಸಾವಿರ ಕೋಟಿ ರುಪಾಯಿ ತಕ್ಷಣ ಬಿಡುಗಡೆ ಮಾಡುವಂತೆ ಸೂಚಿಸಲಾಗಿದೆ ಎಂದರು.