ಗುಜರಾತ್ : ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ ಬೈಕ್ ಸವಾರರ ಮೇಲೆ ಕ್ರಮ ಕೈಗೊಂಡ ಪೊಲೀಸರನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗುಜರಾತ್ನ ವಡೋದರಾದಲ್ಲಿ ನಡೆದಿದೆ.
ಒಂದೇ ಬೈಕ್ ನಲ್ಲಿ ಮೂವರು ಹೋಗುತ್ತಿದ್ದನ್ನು ಪೊಲೀಸರು ತಡೆಯುವಾಗ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಅವರ ಸಂಬಂಧಿಕರು ಮತ್ತು ಸ್ಥಳೀಯರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿ ಪೊಲೀಸರನ್ನೇ ಮನಬಂದಂತೆ ಥಳಿಸಿದ್ದಾರೆ.