ಮುಂಬೈ: 1993ರಲ್ಲಿ ಮುಂಬೈನಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ಐದು ವರ್ಷ ಜೈಲು ಶಿಕ್ಷೆಗೊಳಗಾಗಿರುವ ಬಾಲಿವುಡ್ ನಟ ಸಂಜಯ್ ದತ್ ಬಿಡುಗಡೆಗೆ ಮುಹೊರ್ತ ನಿಗದಿಯಾಗಿದ್ದು, ಫೆಬ್ರುವರಿ 27ರಂದು ಯರವಾಡ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇರುವುದಾಗಿ ಮಾಧ್ಯಮ ವರದಿ ತಿಳಿಸಿದೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದತ್ ಜೈಲುಶಿಕ್ಷೆಯನ್ನು ಮಹಾರಾಷ್ಟ್ರ ಸರ್ಕಾರ ಕಡಿತಗೊಳಿಸಿದ ನಂತರ ಬಿಡುಗಡೆ ಪ್ರಕ್ರಿಯೆಗೆ ಮುಂದಾಗಿರುವುದಾಗಿ ವರದಿ ತಿಳಿಸಿದೆ. ನಟ ಸಂಜಯ್ ದತ್ 1993ರ ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಬಚ್ಚಿಟ್ಟುಕೊಂಡಿದ್ದ ಆರೋಪದಲ್ಲಿ ಸುಪ್ರೀಂಕೋರ್ಟ್ ದೋಷಿ ಎಂದು ತೀರ್ಪು ನೀಡಿ 5 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಇದೀಗ ದತ್ ಅವರ ನಡವಳಿಕೆ ಆಧಾರದ ಮೇಲೆ ಶಿಕ್ಷೆಯನ್ನು ಕಡಿತಗೊಳಿಸಿರುವ ಮಹಾರಾಷ್ಟ್ರ ಸರ್ಕಾರ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ವರದಿ ವಿವರಿಸಿದೆ.