News Kannada
Wednesday, October 05 2022

ದೇಶ-ವಿದೇಶ

ಕೇರಳ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರ ಬಿಡುಗಡೆ - 1 min read

Photo Credit :

ಕೇರಳ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರ ಬಿಡುಗಡೆ

ಹೊಸದಿಲ್ಲಿ: ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿನಿಯನ್ನು ಪೈಶಾಚಿಕ ರೀತಿಯಲ್ಲಿ ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಎಪ್ರಿಲ್ 28ರಂದು ಕಾನೂನು ವಿದ್ಯಾರ್ಥಿನಿಯ ಮೇಲೆ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರಗೈದು ಹತ್ಯೆ ಮಾಡಲಾಗಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೇರಳ ರಾಜ್ಯದ ಜನತೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಒತ್ತಾಯ ಕೇಳಿಬಂದಿದೆ.  ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೇರಳ ಸರ್ಕಾರದಿಂದ ವಿಸ್ತೃತ ವರದಿ ನೀಡುವಂತೆ ಕೇಳಿದೆ. ಕೇಂದ್ರ ಸರ್ಕಾರದೊಂದಿಗೆ ರಾಷ್ಟ್ರೀಯ ಮಾನವಹಕ್ಕು ಆಯೋಗ ಸಹ ಕೇರಳ ಸರ್ಕಾರಕ್ಕೆ ನೊಟೀಸ್ ನೀಡಿದ್ದು ವರದಿ ನೀಡುವಂತೆ ಸೂಚನೆ ನೀಡಿದೆ.

ಯುವತಿಯ ಮರಣೋತ್ತರ ವರದಿಯ ಪ್ರಕಾರ, ಆಕೆಗೆ ಕ್ರೂರ ಹಿಂಸೆ ನೀಡಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು ಎಂದು ದೃಢಪಟ್ಟಿದೆ. ಆಕೆಯ ದೇಹದಲ್ಲಿ 38 ಗಾಯಗಳಾಗಿದ್ದವು. ಅದು ಅತ್ಯಾಚಾರವೆಸಗಿರುವುದನ್ನು ಸೂಚಿಸುತ್ತದೆ ಎಂದಷ್ಟೇ ಪೊಲೀಸರು ಹೇಳಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ವರದಿಯ ಕುರಿತು ಹೆಚ್ಚಿನ ವಿವರ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

ಘಟನೆ ನಡೆದು ಒಂದು ವಾರವಾಗಿದ್ದರೂ ಇಲ್ಲಿಯವರೆಗೆ ಯಾರೊಬ್ಬರನ್ನೂ ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಈ ಬಗ್ಗೆ ಪೊಲೀಸರ ವಿರುದ್ಧ ನಾಗರಿಕರು ಆಕ್ರೋಶ ವ್ಯಕ್ತ ಪಡಿಸಿದ್ದರು. ಆದಾಗ್ಯೂ, ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

See also  ಗೋವಾ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ಬಿಜೆಪಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು