ಹೊಸದಿಲ್ಲಿ: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಸಚಿವ ಕೆ.ಜೆ. ಜಾರ್ಜ್ ಅವರ ರಾಜಿನಾಮೆ ಪಡೆಯುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂದೇಶ ರವಾನಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಜಾರ್ಜ್ ಅವರ ರಾಜಿನಾಮೆ ನಿರ್ಧಾರ ಕೈಗೊಳ್ಳಲು ಸಿದ್ದರಾಮಯ್ಯ ಸ್ವತಂತ್ರರಾಗಿದ್ದು, ಆ ಬಗ್ಗೆ ಅವರ ನಿರ್ಧಾರ ಅಂತಿಮ ಎಂದು ಸೋನಿಯಾ ಹೇಳಿರುವುದಾಗಿ ವರದಿ ವಿವರಿಸಿದೆ. ಜಾರ್ಜ್ ಅವರು ಸೋನಿಯಾ ಗಾಂಧಿ ಅವರಿಗೂ ಆಪ್ತರಾಗಿದ್ದು, ಗಣಪತಿ ಪ್ರಕರಣದ ಬಗ್ಗೆ ನಿನ್ನೆಯವರೆಗೆ ನಡೆದ ಬೆಳವಣಿಗೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.