ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸೇನಾಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಭಾರತೀಯ ಸೇನೆಗೆ ಸೇರಿರುವ ಚೀತಾ ಹೆಲಿಕಾಪ್ಟರ್ ಬೆಳಗ್ಗೆ ಸುಮಾರು 11.45ಕ್ಕೆ ಘಟನೆ ಸಂಭವಿಸಿದ್ದು, ಹೆಲಿಕಾಪ್ಟರ್ನಲ್ಲಿ ಒಟ್ಟು ನಾಲ್ವರು ಸೇನಾಧಿಕಾರಿಗಳು ಪ್ರಯಾಣ ಬೆಳೆಸುತ್ತಿದ್ದರು. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಗಾಯಾಳು ಅಧಿಕಾರಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಐದು ಮಂದಿ ಆಸೀನರಾಗಿ ಪ್ರಯಾಣಿಸ ಬಹುದಾಗಿದ್ದ ಚೀತಾ ಹೆಲಿಕಾಪ್ಟರ್ ಅನ್ನು ಸೇನೆಯ ವಿವಿಧ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿತ್ತು. ಹೆಲಿಕಾಪ್ಟರ್ ದುರಂತ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ದುರಂತಕ್ಕೆ ನಿಖರ ಮಾಹಿತಿ ಲಭ್ಯವಾಗಿಲ್ಲ.