ಚೆನ್ನೈ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಅನಾರೋಗ್ಯಕ್ಕೀಡಾಗಿರುವ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಿದ್ದಾರೆ.
ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕರುಣಾನಿಧಿ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಕರುಣಾ ನಿಧಿ ಡಿಸೆಂಬರ್ 1 ರಂದು ನಿರ್ಜಲೀಕರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಕೆಲ ದಿನಗಳ ಹಿಂದೆ ಆಸ್ಪತ್ರೆಯಿಂದ ಹೊರಬಂದಿದ್ದು, ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಗುರುವಾರ ರಾತ್ರಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.