ಕೋಟಾ: ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಮೋದಿಯವರ ಹಳೆ ನೋಟ್ ಬ್ಯಾನ್ ಯೋಜನೆಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ.
ಕೇಂದ್ರ ಸರ್ಕಾರ ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ವಿದೇಶದಲ್ಲಿರುವ ಕಪ್ಪು ಹಣವನ್ನು ಮತ್ತೆ ಭಾರತಕ್ಕೆ ತರಲು ಸರ್ಕಾರವು ಒಳ್ಳೆಯ ಕೆಲಸ ಮಾಡುತ್ತಿದೆ. ಭ್ರಷ್ಟಾಚಾರ ಮತ್ತು ಕಪ್ಪು ಹಣವನ್ನು ತಡೆಯಲು ಗರಿಷ್ಟ ಬೆಲೆಯ ನೋಟುಗಳ ನಿಷೇಧ ಒಂದು ಒಳ್ಳೆಯ ಯೋಜನೆ ಎಂದು ಜಶೋದಾ ಬೆನ್ ಹೇಳಿದ್ದಾರೆ.
ಮೋದಿ ಪತ್ನಿ ಜಶೋದಾ ಅವರು ರಾಜಸ್ಥಾನದ ಕೋಟಾದಲ್ಲಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸಮಯ ಕೇಂದ್ರ ಸರ್ಕಾರದ ಕಾರ್ಯದ ಬಗ್ಗೆ ಮಾಧ್ಯಮವರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.