ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ನಡುರಸ್ತೆಯಲ್ಲಿಯೇ 23 ವರ್ಷದ ಟೆಕ್ಕಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ 8ಗಂಟೆಗೆ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಮಯ ದುಷ್ಕರ್ಮಿಗಳು ಟೆಕ್ಕಿಯ ಮೇಲೆ ದಾಳಿ ಮಾಡಿದ್ದು, ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಅಂತರ ದಾಸ್ ಕೊಲೆಯಾದ ಮಹಿಳಾ ಟೆಕ್ಕಿಯಾಗಿದ್ದು, ಇವರು ಮೂಲತಃ ಪಶ್ಚಿಮ ಬಂಗಾಳದವರಾಗಿದ್ದಾರೆ.