ಚೆನ್ನೈ: ತಮಿಳುನಾಡಿನ ಮಾಜಿ ಸಿ.ಎಂ ಜಯಲಲಿತಾ ನಿಧನದ ಬಳಿಕ ತೆರವುಕೊಂಡಿದ್ದ ಎಐಎಡಿಎಂಕೆ ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶಶಿಕಲಾ ನಟರಾಜನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಶಿಕಲಾ ಅವರು ಇಂದು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಜಯಲಲಿತಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಬೇಕಾದರೆ ಪಕ್ಷದ ಸಕ್ರಿಯ ಸದಸ್ಯನಾಗಿ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಆದರೂ ಶಶಿಕಲಾರವರಿಗೆ ಈ ಅರ್ಹತೆ ಇಲ್ಲದಿದ್ದರೂ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.