ಇಸ್ಲಾಮಾಬಾದ್: ಪರಚಿನಾರ್ನಾ ಮಾರ್ಕೆಟ್ ನಲ್ಲಿ ಇಂದು ಸ್ಫೋಟ ಸಂಭವಿಸಿದ್ದು, ಸ್ಪೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, 30 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಕುರಾಮ್ ನಲ್ಲಿ ಹೆಚ್ಚಾಗಿ ಬುಡಕಟ್ಟು ಜನರು ವಾಸವಾಗಿದ್ದು ಹಲವು ವರ್ಷಗಳಿಂದ ಇಲ್ಲಿ ಅಪಹರಣ, ದಾಳಿಗಳು ಸರ್ವೆಸಾಮಾನ್ಯವಾಗಿವೆ. ಬಾಂಬ್ ಸ್ಫೋಟ ನಡೆದ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದು, ಇನ್ನು ಸ್ಫೋಟದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.