ಇಸ್ಲಾಮಾಬಾದ್: ಕಳೆದ ವರ್ಷ ಬಾರತದ ಯೋಧನನೊಬ್ಬ ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಪಾಕಿಸ್ತಾನದ ಗಡಿಯೊಳಗೆ ಹೋಗಿ ಸಿಕ್ಕಿ ಹಾಕಿಕೊಂಡಿದ್ದು, ಇದೀಗ ಅವರನ್ನು ಬಿಡುಗಡೆ ಮಾಡುವುದಾಗಿ ಶನಿವಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.22 ವರ್ಷದ ಯೋಧ ಚಂದು ಚವ್ಹಾಣ್ ಅವರು ಪಾಕಿಸ್ತಾನದ ಗಡಿಯೊಳಗೆ ಸಿಕ್ಕಿ ಹಾಕಿಕೊಂಡವರು. ಅವರನ್ನು ಮಾನವೀಯತೆ ಆಧಾರದ ಮೇಲೆ ವಾಗಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಒಪ್ಪಿಸುವುದಾಗಿ ಪಾಕ್ ಸೇವೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಹಾರಾಷ್ಟ್ರದ ಭಮ್ರೆ ಜಿಲ್ಲೆಯ ಧುಲೆ ಎಂಬ ಊರಿನ ಚಂದು , 2016ರ ಸೆಪ್ಟಂಬರ್ 30ರಂದು ತಮಗರಿವಿಲ್ಲದಂತೆಯೇ ಪಾಕಿಸ್ತಾನದ ಗಡಿ ದಾಟಿ ಹೋಗಿದ್ದರು. 37ನೇ ರಾಷ್ಟ್ರೀಯ ರೈಫಲ್ಸ್ನ ಯೋಧ ಚಂದು ಅವರ ಬಿಡುಗಡೆಗೆ ಕೇಂದ್ರ ಸರ್ಕಾರ ಸತತ ಪ್ರಯತ್ನ ನಡೆಸುತ್ತಿರುವುದಾಗಿ ಈ ಹಿಂದೆ ಹೇಳಿತ್ತು. ಚಂದು ಪಾಕಿಸ್ತಾನದ ವಶದಲ್ಲಿರುವ ಸುದ್ದಿಯಿಂದ ಆಘಾತಗೊಂಡಿದ್ದ ಅವರ ಅಜ್ಜಿ ಲೀಲಾಬಾಯಿ ನಿಧನರಾಗಿದ್ದರು.
ಪಾಕಿಸ್ತಾನ ಗಡಿಯೊಳಕ್ಕೆ ನುಸುಳಿ ಅಲ್ಲಿ ಸೆರೆ ಸಿಕ್ಕಿರುವ ಯೋಧ ಚಂದು ಚವ್ಹಾಣ್ ಬಗ್ಗೆ ಮಾಹಿತಿ ಕಲೆಹಾಕಿದ್ದ ಭಾರತದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರು ಪಾಕಿಸ್ತಾನದ ಸೇನಾ ಕಾರ್ಯಾಚರಣೆಯ ಮಹಾ ನಿರ್ದೇಶಕರೊಂದಿಗೆ ಯೋಧನ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದರು